
ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ಶ್ರೀ ಮಾನ್ಯತಾ ವಾಲೆಂಟರಿ ಬ್ಲಡ್ ಸೆಂಟರ್ ಸಹಯೋಗದೊಂದಿಗೆ ಇಂದು (ಜ.21ರ ಬುಧವಾರ) ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜನೆ ಮಾಡಲಾಗಿತ್ತು.

ಬೆಳಗ್ಗೆ 10ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೊಡ್ಡಬಳ್ಳಾಪುರ ತಾಲೂಕಿನ ಗೌರಿಬಿದನೂರು ರಸ್ತೆಯ ಫ್ರೆಂಡ್ಸ್ ಫಂಕ್ಷನ್ ಹಾಲ್ ಎದುರಿನ ಸಹ್ಯಾದ್ರಿ ಆಸ್ಪತ್ರೆಯಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತದಾನಿಗಳು ಸ್ವಯಂಪ್ರೇರಿತರಾಗಿ ರಕ್ತ ದಾನ ಮಾಡಿ ಸಾರ್ಥಕತೆ ಮೆರೆದರು..

ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಸುಮಾರು 45ಯೂನಿಟ್ ರಕ್ತ ಸಂಗ್ರಹ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ… ರಕ್ತದಾನ ಮಾಡಿದವರಿಗೆ ಪ್ರಮಾಣಪತ್ರ, ಹಣ್ಣುಹಂಪಲು ನೀಡಿ ಸತ್ಕರಿಸಲಾಯಿತು…

ಈ ವೇಳೆ ಆಸ್ಪತ್ರೆಯ ಆಡಳಿತ ಮಂಡಳಿಯವರು, ವೈದ್ಯರು, ಶ್ರೀ ಮಾನ್ಯತಾ ವಾಲೆಂಟರಿ ಬ್ಲಡ್ ಸೆಂಟರ್ ನ ಸಿಬ್ಬಂದಿ ಸೇರಿದಂತೆ ಇತರರು ಉಪಸ್ಥಿತರಿದ್ದರು…

ಹೆಚ್ಚಿನ ಮಾಹಿತಿಗಾಗಿ 6363415184, 9738881325, 9035161666, 8147736966 ಸಂಪರ್ಕಿಸಬಹುದಾಗಿದೆ…