ನಾನು KMF ಅಧ್ಯಕ್ಷ ಅಕಾಂಕ್ಷಿಯಲ್ಲ- ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್

ನಾನು ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ನಿಯಮಿತ (KMF) ಅಧ್ಯಕ್ಷ ಸ್ಥಾನಕ್ಕೆ ಅಕಾಂಕ್ಷಿಯಲ್ಲ ಎಂದು ಬಮೂಲ್ ಅಧ್ಯಕ್ಷ ಡಿ.ಕೆ ಸುರೇಶ್ ಹೇಳಿದರು..

ಕೆಎಂಎಫ್ ಮತ್ತು ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ಮತ್ತು ಕೊನಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ, ಪಶುಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ ತಾಲ್ಲೂಕಿನ ಕೊನಘಟ್ಟ ಗ್ರಾಮದಲ್ಲಿ ಇಂದು (ಭಾನುವಾರ) ತಾಲ್ಲೂಕು ಮಟ್ಟದ ಅಧಿಕ ಹಾಲು ಕರೆಯುವ ಸ್ಪರ್ಧೆಯನ್ನು ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ನಾನು ಯಾವುದಕ್ಕೂ ಆಕಾಂಕ್ಷಿಯಲ್ಲ. ನಂದಿನಿ ಹಾಲು, ತುಪ್ಪ ಬಳಸಿ ರೈತರನ್ನ ಉಳಿಸಿ ಎಂದು ಹೇಳುವ ಮೂಲಕ ಜಾರಿಕೊಂಡರು…

ಈ ವೇಳೆ ಮಾಜಿ ಶಾಸಕ ಟಿ.ವೆಂಕಟರಮಣಯ್ಯ, ಬಮೂಲ್ ನಿರ್ದೇಶಕ ಬಿ.ಸಿ ಆನಂದ್ ಸೇರಿದಂತೆ ಇತರರು ಉಪಸ್ಥಿತರಿದ್ದರು…

Leave a Reply

Your email address will not be published. Required fields are marked *

error: Content is protected !!