ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ.

2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ಎಸ್‌.ಎನ್‌. ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರವು ದೋಷದಿಂದ ಕೂಡಿದ್ದು, ಆಸ್ತಿ ವಿವರಗಳನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಸಿದ್ದಾರೆ. ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕೆಂದು ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಹೈಕೋರ್ಟ್‌ಗೆ ಅರ್ಜಿಸಲ್ಲಿಸಿದ್ದರು.

ವಿವಿಧ ಹಂತಗಳಲ್ಲಿ ವಿಚಾರಣೆ ನಡೆಸಿದ ನ್ಯಾ. ಎಂಜಿಎಸ್‌ ಕಮಲ್‌ ಅವರ ಪೀಠವು ಶಾಸಕರ ಆಯ್ಕೆಯನ್ನು ಅಸಿಂಧುಗೊಳಿಸಿದೆ ಆದೇಶ ನೀಡಿದೆ. ಆದರೆ, 2 ನೇ ಅಭ್ಯರ್ಥಿ ಸಿ. ಮುನಿರಾಜುಗೆ ಗೆಲುವು ಎಂದು ಘೋಷಿಸಲು ನಿರಾಕಣೆ ಮಾಡಿದೆ. ಅಸಿಂಧುಗೊಳಿಸಿದ ಆದೇಶ ಚುನಾವಣಾ ಆಯೋಗಕ್ಕೆ, ವಿಧಾನಸಭೆ ಕಾರ್ಯದರ್ಶಿಗೂ ಕಳುಹಿಸಲು ರವಾನಿಸಲು ಪೀಠವು ನಿರ್ದೇಶನ ನೀಡಿದೆ.

Leave a Reply

Your email address will not be published. Required fields are marked *

error: Content is protected !!