ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ ಆಕ್ರೋಷ ವ್ಯಕ್ತಪಡಿಸಿದ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚುಂಚಗಹಳ್ಳಿಯಲ್ಲಿ ನಡೆದಿದೆ.

ಅದೇ ಗ್ರಾಮದ ವಿನೋದ್ ಎಂಬಾತನನ್ನ ಪ್ರೀತಿಸಿ ಮದುವೆಯಾಗಿದ್ದ ಕಾವ್ಯ.ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಕಾವ್ಯ-ವಿನೋದ್.

ವಿನೋದ್ ಜೊತೆ ಕಾವ್ಯ ಮದುವೆಗೆ ತಂದೆ ಚನ್ನೇಗೌಡ ವಿರೋಧಿಸಿದ್ದರು. ವಿನೋದ್ ಮನೆಗೆ ಚೆನ್ನೇಗೌಡ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯಲ್ಲಿ ಬೆಂಕಿ ಹಚ್ಚಿದ ಚನ್ನೇಗೌಡನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಅನಾಹುತ ತಪ್ಪಿದೆ. ಮನೆಯಲ್ಲಿದ್ದ ಪೀಠೋಪಕರಣ, ಎಲೆಕ್ಟ್ರಾನಿಕ್ಸ್ ವಸ್ತುಗಳು, ಬಟ್ಟೆಗಳು ಇತರೆ ವಸ್ತು ಬೆಂಕಿಗೆ ಆಹುತಿಯಾಗಿದೆ. ಗಾಯಾಳು ಚನ್ನೇಗೌಡ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರ ಭೇಟಿ ನೀಡಿದ್ದಾರೆ. ಮದ್ದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

Leave a Reply

Your email address will not be published. Required fields are marked *

error: Content is protected !!