ಚರಂಡಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ..!

ಚರಂಡಿಯಲ್ಲಿ‌ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದ ಸ್ವರ್ಣಾದ್ರಿ ಹೋಟೆಲ್ ಮುಂಭಾಗದಲ್ಲಿ ನಡೆದಿದೆ…

ಮಹಿಳೆ ಶವ ಸುಮಾರು ಒಂದು ವಾರದ ಹಿಂದೆಯೇ ಚರಂಡಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಮಹಿಳೆ ತಲೆ ಭಾಗದಲ್ಲಿ ದಾರ ಕಣಿಸುತ್ತಿರುವುದರಿಂದ‌ ಕೊಲೆಯಾಗಿರಬಹದು ಎಂದು ಶಂಕಿಸಲಾಗಿದೆ.. ಕೊಲೆಯೋ ಅಥವಾ ಸಹಜ ಸಾವೋ ಎಂದು ಪೊಲೀಸರ ತನಿಖೆಯಿಂದ ತಿಳಿಯಬೇಕಿದೆ.

ದೇವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..

Leave a Reply

Your email address will not be published. Required fields are marked *

error: Content is protected !!