ಇಂದು ಇತಿಹಾಸ ಪ್ರಸಿದ್ಧ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ: ಮುಂಜಾನೆಯಿಂದಲೇ ಆರಂಭಗೊಂಡ ವಿಶೇಷ ಪೂಜೆ, ಪುನಸ್ಕಾರ

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ. ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿದೆ. ದೇವರಿಗೆ ವಿವಿಧ ಪುಷ್ಪಗಳಿಂದ ಅಲಂಕರಿಸಿ, ಇಂದು ಮುಂಜಾನೆಯಿಂದಲೇ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಗುತ್ತಿದೆ.. ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ…

ಇಂದು ಮಧ್ಯಾಹ್ನ 1:15ರಿಂದ 2:10 ಗಂಟೆಯೊಳಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಲಿದೆ. ಬ್ರಹ್ಮರಥೋತ್ಸವವು ಈ ಬಾರಿ ಹಲವು ವಿಶೇಷತೆಗಳಿಂದ ಕೂಡಿರಲಿದೆ. ತಾಲ್ಲೂಕಿನೆಲ್ಲೆಡೆಯಿಂದ 101 ಉತ್ಸವ ಮೂರ್ತಿಗಳನ್ನು ಬೆಳ್ಳಿ ರಥದೊಂದಿಗೆ ಕರೆಸಿ ಮೂಲ ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಿಸಿ ಶಾಲಾ ಆವರಣದಲ್ಲಿ ಸ್ಥಾಪಿಸಿ ವಿಶೇಷ ಪೂಜೆ ನೆರವೇರಿಸಲಾಗುವುದು.

ಫೆ.25ರಿಂದ ಮಾ.3 ರ ವರೆಗೆ ವಿಶೇಷವಾದ ಉತ್ಸವ ಕಾರ್ಯಕ್ರಮಗಳು ನೆರವೇರಲಿದೆ. ಮೊಬೈಲ್ ಆರ್ಕೆಸ್ಟ್ರಾ, ಜಿ ಕನ್ನಡ ವಾಹಿನಿಯ ಸರಿಗಮಪ ತಂಡದ ಖ್ಯಾತ ಚಲನಚಿತ್ರ ನಟರನ್ನೊಳಗೊಂಡ ಸಂಗೀತ ಸಂಜೆ, ಮದ್ದಿನ ಮರದ ಕಾರ್ಯಕ್ರಮ, ಕಾಕವಾಹನೋತ್ಸವ, ಚಂದ್ರಮಂಡಲೋತ್ಸವ, ಸುಪ್ರಭಾತೋತ್ಸವ, ಡೊಳ್ಳುಕುಣಿತ, ತೆಪ್ಪೋತ್ಸವ ಸೇರಿದಂತೆ ಹಲವು ಉತ್ಸವಗಳನ್ಮು ಹಮ್ಮಿಕೊಳ್ಳಲಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಭಕ್ತಾಧಿಗಳಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿದೆ.. ಸೂಕ್ತ ಪೊಲೀಸ್ ಬಂದೋಬಸ್ತ್, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಮಾಡಲಾಗಿದೆ….

Leave a Reply

Your email address will not be published. Required fields are marked *

error: Content is protected !!