ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ ಸಂಪನ್ನ 

ಇಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ಶ್ರದ್ಧಾಭಕ್ತಿಯಿಂದ, ವಿಜೃಂಭಣೆಯಿಂದ ನೆರವೇರಿಸಲಾಯಿತು.

ಪ್ರತಿವರ್ಷದಂತೆ ಈ ವರ್ಷವು ಸಹ ಬ್ರಹ್ಮರಥೋತ್ಸವನ್ನು ಅದ್ಧೂರಿಯಾಗಿ ನೆರವೇರಿಸಲು ಸಕಲ ಸಿದ್ಧತೆ ನಡೆಸಿಕೊಳ್ಳಲಾಗಿತ್ತು. ಇಂದು ಮುಂಜಾನೆಯಿಂದಲೇ ದೇವರಿಗೆ ವಿಶೇಷ ಪೂಜೆ ಪುನಸ್ಕಾರಗಳನ್ನು ನೆರವೇರಿಸಲಾಗಿತ್ತು.. ಭಕ್ತಾಧಿಗಳು ಸಾಗರೋಪಾದಿಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಿದ್ದಾರೆ…

ಇಂದು ಮಧ್ಯಾಹ್ನ ಸುಮಾರು 2 ಗಂಟೆಗೆ ಸಲ್ಲುವ ಶುಭಲಗ್ನದಲ್ಲಿ 71ನೇ ಬ್ರಹ್ಮರಥೋತ್ಸವ ನೆರವೇರಿತು.

ಭಕ್ತಾಧಿಗಳಿಗೆ ಅನ್ನದಾಸೋಹ ವ್ಯವಸ್ಥೆ ಮಾಡಲಾಗಿತ್ತು.. ಸೂಕ್ತ ಪೊಲೀಸ್ ಬಂದೋಬಸ್ತ್, ಸಾರಿಗೆ ವ್ಯವಸ್ಥೆ ಸೇರಿದಂತೆ ಇತರೆ ಸೌಕರ್ಯಗಳನ್ನು ಮಾಡಲಾಗಿತ್ತು….

Leave a Reply

Your email address will not be published. Required fields are marked *

error: Content is protected !!