ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!