Alipura: ಇರಾನ್ ಮೇಲೆ ಇಸ್ರೇಲ್-ಅಮೆರಿಕಾ‌ ದಾಳಿ – ಅಲೀಪುರದಲ್ಲಿ ಶೋಕಾಚರಣೆ- ಇಸ್ರೇಲ್-ಅಮೆರಿಕಾ ವಿರುದ್ಧ ಆಕ್ರೋಶ

ಅಮೆರಿಕ – ಇಸ್ರೇಲ್‌ ಜಂಟಿ ದಾಳಿಯಲ್ಲಿ ಇರಾನ್ ಸುಪ್ರೀಂ ಲೀಡರ್ ಅಯಾತೊಲ್ಲ ಅಲಿ ಖಮೇನಿ ಸಾವಿನಪ್ಪಿರುವ ಸುದ್ದಿ ಕೇಳಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲೀಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

ಗ್ರಾಮದಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನ ಸಂಪೂರ್ಣ ಬಂದ್ ಮಾಡಲಾಗಿದೆ. 3 ದಿನಗಳ ಕಾಲ ಕರಾಳ ದಿನ ಆಚರಣೆ ಮಾಡಲು ತೀರ್ಮಾನಿಸಲಾಗಿದೆ.

ಬೇಬಿ ಅಪ್ ಇರಾನ್ ಅಂತಲೇ ಕರೆಸಿಕೊಳ್ಳುವ ಅಲೀಪುರ ಗ್ರಾಮಕ್ಕೆ 1986 ರಲ್ಲಿ ಖಮೇನಿ ಭೇಟಿ ನೀಡಿದ್ರು. ಇವರ ಹೆಸ್ರಲ್ಲಿ ಆಸ್ಪತ್ರೆ ಸಹ ಈ ಗ್ರಾಮದಲ್ಲಿದೆ. ಖಮೇನಿ ಅಂದ್ರೆ ಇಲ್ಲಿನ ಜನರಿಗೆ ಪೂಜ್ಯ ಮತ್ತು ಗೌರವ ಭಾವ. ಹಾಗಾಗಿ ಅವರ ಸಾವಿನ ಸುದ್ದಿಯಿಂದ ಅಲೀಪುರ ಸ್ತಬ್ಧವಾಗಿದೆ. ಇನ್ನೂ ಅಲೀಪುರದ ಕೆಲವರು ಧಾರ್ಮಿಕ ಶಿಕ್ಷಣ ಪಡೆಯುವ ಸಲುವಾಗಿ ಇರಾನ್ ನಲ್ಲಿ ನೆಲೆಸಿದ್ದಾರೆ. ಕೆಲ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ವ್ಯಾಸಂಗ ಮಾಡುತ್ತಿದ್ದಾರೆ.

ಇರಾನ್‌ನಲ್ಲಿ ಯುದ್ಧ ಸಂಭವಿಸಿದಾಗಲೆಲ್ಲಾ ಇಲ್ಲಿನ ಜನರ ಹೃದಯ ಕಲುಕುತ್ತೆ. ತಮ್ಮವರಿಗೆ ಏನಾಯ್ತೋ ಅನ್ನೋ ಆತಂಕ ಮನೆ ಮಾಡುತ್ತೆ. ಸದ್ಯ ಅಲೀಪುರ ಗ್ರಾಮ ಮೌನಕ್ಕೆ ಜಾರಿದೆ.

Leave a Reply

Your email address will not be published. Required fields are marked *

error: Content is protected !!