ಇಂದು ಬೆಳ್ಳಂಬೆಳಗ್ಗೆ ಹಾಲಿನ ವಾಹನ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ನಗರದ ಡಿಮಾರ್ಟ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಡಿವೈಡರ್ ಗೆ ಡಿಕ್ಕಿ ಹೊಡೆಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಹಾಲಿನ ಡಬ್ಬಗಳು ನೆಲಕ್ಕುರಳಿ ಸಾಕಷ್ಟು ಲೀಟರ್ ಹಾಲು ಮಣ್ಣುಪಾಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಯ ಸಂಭವಿಸಿಲ್ಲ.
ಸ್ಥಳಕ್ಕೆ 112ಗಸ್ತು ವಾಹನದ ಸಿಬ್ಬಂದಿ ಧಾವಿಸಿ, ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.