
ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ ನಡೆದಿದೆ..
ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಕಳ್ಳರು, ದೇವಿಯ ವಿಗ್ರಹಕ್ಕೆ ಅಳವಡಿಸಿದ್ದ 10-15 ಗ್ರಾಂ ತೂಕದ ಚಿನ್ನದ ಮೂರು ಮಾಂಗಲ್ಯ ಹಾಗೂ ನಾಲ್ಕು ಗುಂಡುಗಳನ್ನು ಕದ್ದು ಎಸ್ಕೇಪ್ ಆಗಿದ್ದಾರೆ.
ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.