
ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದ ಬಳಿಯ ವಿದ್ಯುತ್ ಪ್ರಸರಣ ಘಟಕದ ಬಳಿ ನಡೆದಿದೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

ವಾಹನವನ್ನು ಹಿಂದಿಕ್ಕುವ ವೇಳೆ ಅತಿವೇಗದಲ್ಲಿದ್ದ ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿದೆ.
ಫುಟ್ ಪಾತ್ ಗೆ ಗುದ್ದಿದ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರದ ತಂತಿ ಬೇಲಿಗೆ ನುಗ್ಗಿದೆ, ತಂತಿ ಬೇಲಿಗೆ ಹಾನಿಯಾಗಿದೆ, ಬೈಕ್ ಸವಾರನಿಗೆ ಗಾಯವಾಗಿದೆ. ಟ್ರಾನ್ಸ್ ಫಾರ್ಮರ್ ನಿಂದ ಬೆಂಕಿ ಹೊತ್ತಿಕೊಂಡಿದ್ದಾರೆ ಭಾರೀ ಅನಾಹುತವೇ ಸಂಭವಿಸುತ್ತಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.