ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌ ಸಮಾಜ ಪಕ್ಷವನ್ನು ಹುಟ್ಟುಹಾಕಿದ್ದರು. ಮಹಾತ್ಮ ಗಾಂಧಿ, ಬಾಬಾ ಸಾಹೇಬ್‌ ಅಂಬೇಡ್ಕರ್‌ ಹಾಗೂ ಕಾನ್ಸಿರಾಮ್ ಅವರು ಎಂದಿಗೂ ತತ್ವಗಳಲ್ಲಿ ರಾಜಿ ಮಾಡಿಕೊಳ್ಳಲಿಲ್ಲ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದಿಗುಂದ ಪಿ‌. ವೆಂಕಟೇಶ್ ಹೇಳಿದರು.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ವತಿಯಿಂದ ನಗರದ ಪ್ರವಾಸಿ ಮಂದಿರದಲ್ಲಿ ಆಯೋಜನೆ ಮಾಡಲಾಗಿದ್ದ ಬಹುಜನ ನಾಯಕ ಮಾನ್ಯವರ್ ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಹುಜನರು ರಾಜಕೀಯ ಅಧಿಕಾರ ಪಡೆಯಬೇಕೆಂಬ ಹೆಬ್ಬಯಕೆಯಿಂದ ಕಾನ್ಸಿರಾಮ್ ಅವರು ಬಿಎಸ್ಪಿ ಪಕ್ಷ ಆರಂಭಿಸಿದರು. ಬಹುಜನರ ಏಳಿಗೆಗಾಗಿ ಅವರ ಕೊಡುಗೆ ಅಪಾರ ಎಂದರು.

ಕೇಂದ್ರಸರ್ಕಾರದ ನೂತನ ನೀತಿಗಳಿಂದ ಖಾಸಗೀರಣಗೊಳ್ಳುತ್ತಿರುವ ಸರ್ಕಾರಿ ಸಂಸ್ಥೆಗಳ ಉದ್ಯೋಗಗಳಲ್ಲಿ ಮೀಸಲಾತಿ ಜಾರಿಯಾಗಬೇಕು. ಇದರಿಂದ ದಲಿತ ಮತ್ತು ಹಿಂದುಳಿದ ವರ್ಗದ ಜನತೆಗೆ ದೇಶಾದ್ಯಂತ ಅನುಕೂಲವಾಗಲಿದೆ ಎಂದರು.

ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಲ್‌ಇಂಡಿಯಾ ಬಹುಜನ ಸಮಾಜ ಪಾರ್ಟಿಯಿಂದ ಪ್ರತಿಯೊಂದು ಕ್ಷೇತ್ರದಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ರಾಜಕಾರಣ ಕೇವಲ ಅಧಿಕಾರಕ್ಕಾಗಿ ಮಾತ್ರವಲ್ಲದೆ, ದೇಶದಲ್ಲಿ ಭ್ರಷ್ಟಾಚಾರ, ಅಧಿಕಾರ ವಹಿಸಿಕೊಂಡವರ ದಬ್ಬಾಳಿಕೆ ತೊಲಗಿಸಬೇಕು. ಕಾನ್ಶಿರಾಮ್ ಅವರು ಇದೇ ದೃಷ್ಟಿಯಿಂದ ಪಕ್ಷವನ್ನು ಬಲಪಡಿಸಿದ್ದರು. ರಾಜ್ಯ ರಾಜಕಾರಣದಲ್ಲಿ ಮತದಾರರಿಗೆ ಹಣ, ಮದ್ಯ ಹಂಚಿಕೆ ಮಾಡಿ ರಾಷ್ಟ್ರೀಯ ಪಕ್ಷಗಳು ಜನರನ್ನು ದಾರಿ ತಪ್ಪಿಸುತ್ತಿವೆ. ಸಾಮಾಜಿಕ ನ್ಯಾಯ ಸಿಗಬೇಕು ಎಂಬುದು ನಮ್ಮ ಉದ್ದೇಶ. ಸಾರ್ವಜನಿಕ ಸರಕಾರಿ ಕಚೇರಿಗಳಲ್ಲಿ ಬಡವರ, ಮದ್ಯಮ ವರ್ಗದವರ ಕೆಲಸಗಳು ಆಗುತ್ತಿಲ್ಲ. ಉಳ್ಳವರಿಗೆ ಮಾತ್ರ ಅಧಿಕಾರಿಗಳು ಕೆಲಸ ಮಾಡಿಕೊಡುತ್ತಾರೆ ಎಂದು ಆರೋಪಿಸಿದರು.

ಈ ವೇಳೆ ರಾಜ್ಯ ಪ್ರಧಾನ ಕಾರ್ಯದರ್ಶಿ ಮುನಿಕೃಷ್ಣಪ್ಪ, ಮುನಿಕೃಷ್ಣಪ್ಪ, ರಾಜ್ಯ ಕಾರ್ಯದರ್ಶಿ ನಾಗರಾಜು, ಬಸವರಾಜು, ಜಿಲ್ಲಾಧ್ಯಕ್ಷ ಮಹದೇವ, ತಾಲೂಕು ಅಧ್ಯಕ್ಷ ನಂಜೇಶ್, ಜಿಲ್ಲಾ ಖಜಾಂಚಿ ಹೇಮಾ ಚಕ್ರಪಾಣಿ ಸೇರಿದಂತೆ ಇತರರು ಉಪಸ್ಥಿತರಿದ್ದರು…

Leave a Reply

Your email address will not be published. Required fields are marked *

error: Content is protected !!