‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, ‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ಕುರಿತು ಸುದೀರ್ಘ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ..ಇದು ಸಂತಸದ ವಿಚಾರ ಎಂದು ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಹೇಳಿದ್ದಾರೆ….

ಕಳೆದ ಡಿಸೆಂಬರ್‌ನಲ್ಲಿ ಸಲ್ಲಿಸಲಾದ ₹184 ಕೋಟಿ ಮೊತ್ತದ ಈ ಪ್ರಸ್ತಾವನೆಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂದಿನ ಒಂದು ತಿಂಗಳೊಳಗೆ ಅನುಮೋದನೆ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ ಎಂದು ಸಂಸದರು ತಿಳಿಸಿದ್ದಾರೆ ಎಂದರು…

ಶ್ರೀಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳಿಗೆ ಸುಸಜ್ಜಿತ ಮೂಲಸೌಕರ್ಯ, ನೈರ್ಮಲ್ಯ ಮತ್ತು ಆಧುನಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಈ ಪವಿತ್ರ ಕ್ಷೇತ್ರವನ್ನು ಮಾದರಿ ಯಾತ್ರಾಸ್ಥಳವಾಗಿ ರೂಪಿಸಲು ನಿರ್ಧರಿಸಲಾಗಿದೆ…ಇನ್ನಷ್ಟು ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಎಲ್ಲರು ಸಹಕರಿಸಬೇಕು ಎಂದು  ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸೇರಿದಂತೆ ಇತರರು ಹೇಳಿದ್ದಾರೆ…

Leave a Reply

Your email address will not be published. Required fields are marked *

error: Content is protected !!