ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಆದೇಶಿಸಿದ್ದಾರೆ.

ಇನ್ಸ್‌ಪೆಕ್ಟರ್ ಸಂದೇಶ್ ವಿರುದ್ಧ ಕೇಳಿಬಂದ ಲೈಂಗಿಕ ಕಿರುಕುಳ ಮತ್ತು ಭ್ರಷ್ಟಾಚಾರದ ಆರೋಪಗಳ ಬಗ್ಗೆ ಎಸಿಪಿ ನೀಡಿದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೋ ಮತ್ತು ಆಡಿಯೋ ತುಣುಕುಗಳಲ್ಲಿ ಇನ್ಸ್‌ಪೆಕ್ಟರ್ ಅವರ ವರ್ತನೆ ಅತ್ಯಂತ ಅನುಮಾನಾಸ್ಪದವಾಗಿತ್ತು. ವಿಶೇಷವಾಗಿ ಫೋನ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅವರು ನಡೆಸಿದ ಅಸಭ್ಯ ಸಂಭಾಷಣೆಯು ಪೊಲೀಸ್ ಇಲಾಖೆಯ ಘನತೆಗೆ ಕುಂದು ತಂದಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!