ಚಿತ್ರದುರ್ಗ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಸಾವು ಪ್ರಕರಣ: ಮೃತರ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವಿಗೀಡಾದ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ತಲಾ ರೂ.5 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ರೂ.2 ಲಕ್ಷ ಪರಿಹಾರ ನೀಡಲಾಗುವುದು ಎಂದು‌ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ, ಅವರ ಕುಟುಂಬವರ್ಗಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!