ಹೊನ್ನಾಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಧ್ಯಕ್ಷರಾಗಿ ಮುದ್ದುಕೃಷ್ಣಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಮಯ್ಯ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕು ಕಸಬಾ ಹೋಬಳಿ ಹೊನ್ನಾಘಟ್ಟ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ‌‌ ಇಂದು ನಡೆದ ಚುನಾವಣೆ ನಡೆಯಿತು.

ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಅಧ್ಯಕ್ಷರಾಗಿ ಮುದ್ದುಕೃಷ್ಣಪ್ಪ ಹಾಗೂ ಉಪಾಧ್ಯಕ್ಷರಾಗಿ ರಾಮಯ್ಯ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಶಾಂತರಾಜು, ಅಂಜಿನಮ್ಮ, ಆನಂದ್, ಹನುಮೇಗೌಡ ಎಚ್ ಆರ್, ಬಾಬು ಕುಮಾರ್, ಭಾಗ್ಯಮ್ಮ, ಲಕ್ಷ್ಮಮ್ಮ, ಜೆಡಿಎಸ್ ಹಿರಿಯ ಮುಖಂಡ ಎಚ್.ಆರ್ ನಂಜೇಗೌಡ ಹಾಗೂ ಜೆಡಿಎಸ್ ಮುಖಂಡರು, ಊರಿನ ಗ್ರಾಮಸ್ಥರು ಹಾಜರಿದ್ದರು.

ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಕೆಸ್ತೂರು ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರಾದ ಶೃತಿ ಮಂಜುನಾಥ್ ಹೊನ್ನಾಘಟ್ಟ ಸೇರಿದಂತೆ ಇತರರು ಶುಭಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!