
ಮನೆಯ ಹೊಸ್ತಿಲಿನಲ್ಲಿ ಪೂಜೆಗಾಗಿ ಇಟ್ಟಿದ್ದ ಒಣಗಿದ ದಾಸವಾಳದ ಹೂವನ್ನು ಆಟವಾಡುತ್ತಾ ನುಂಗಿದ ಆರುವರೆ ತಿಂಗಳ ಕಂದಮ್ಮ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ದೊಡ್ಡ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.
ಚಿನ್ಮಯಿಗೌಡ (ಆರುವರೆ ತಿಂಗಳು) ಮೃತಪಟ್ಟ ಕಂದಮ್ಮ.
ಮಗು ಹೂವನ್ನು ನುಂಗಿದ ತಕ್ಷಣ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದೆ. ಗಾಬರಿಗೊಂಡ ಪೋಷಕರು ಕೂಡಲೇ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಗು ಅಸುನೀಗಿದೆ ಎನ್ನಲಾಗಿದೆ.
ಗಂಟಲಿನಲ್ಲಿ ಒಣಗಿದ ದಾಸವಾಳ ಹೂವು ಸಿಲುಕಿಕೊಂಡಿದ್ದೇ ಮಗುವಿನ ಸಾವಿಗೆ ಕಾರಣವೆಂದು ತಿಳಿದುಬಂದಿದೆ.