ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ: ಬಿಡಿಎ ಮೇಲೆ ಕಣ್ಣಿಟ್ಟಿದ್ದ ರಾಜಕಾರಣಿಗಳಿಗೆ ನಿರಾಸೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ರಾಜಕಾರಣಿಗಳ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಎನ್.ಎ ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರು ತೀವ್ರ ಲಾಬಿ ನಡೆಸಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ ಹುದ್ದೆಗೆ IAS ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.

ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಇದು ಅಚ್ಚರಿಕೆ ಕಾರಣವಾಗಿದೆ.

ಸಹಜವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ.

Leave a Reply

Your email address will not be published. Required fields are marked *