ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ.

ರಾಘವೇಂದ್ರ ರೆಡ್ಡಿ ಎಂಬುವವರಿಗೆ ಇ ಖಾತೆ ಮಾಡಲು ಎರಡು ಲಕ್ಷ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಅಡ್ವಾನ್ಸ್ ಆಗಿ ಒಂದು ಲಕ್ಷ‌ ರೂಪಾಯಿ ತೆಗೆದುಕೊಳ್ಳುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಣ ತೆಗೆದುಕೊಳ್ಳುವಾಗ ಲೋಕಾಯುಕ್ತರು ಬರುತ್ತಿದ್ದಂತೆ ಅಧಿಕಾರಿ ಸಿರವಾರದಿಂದ ಕವಿತಾಳ ಪಟ್ಟಣದ ಕಡೆಗೆ ಎಸ್ಕೇಪ್ ಆಗಲು ಯತ್ನಿಸಿದ್ದರು.

ಲೋಕಾಯುಕ್ತ ಅಧಿಕಾರಿಗಳು ಚೇಸ್ ಮಾಡಿ ಭ್ರಷ್ಟ ಅಧಿಕಾರಿಯನ್ನು ಹಿಡಿದಿದ್ದಾರೆ.

ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಇನ್ಸ್ಪೆಕ್ಟರ್ ಪುರುಷೋತ್ತಮ ಸಿಬ್ಬಂದಿ ವಿಜಯಕುಮಾರ್,  ಅಮರೇಶ್ ದಾಳಿಯಲ್ಲಿ ಭಾಗಿಯಾಗಿದ್ದರು..

Leave a Reply

Your email address will not be published. Required fields are marked *

error: Content is protected !!