
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಎರಡು ರಾಷ್ಟ್ರೀಯ ಪಕ್ಷಗಳನ್ನು ವಿರೋಧಿಸಿಕೊಂಡು, ಮುಖಂಡರು, ಕಾರ್ಯಕರ್ತರೊಂದಿಗೆ ಬೆರೆತು ಪಕ್ಷಕ್ಕಾಗಿ ಹಗಲಿರುಳು ಕೆಲಸ ಮಾಡುತ್ತಿದ್ದೇನೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.
ಪಕ್ಷದ ಚಟುವಟಿಕೆ, ಸಂಘಟನೆಗೆ ಹಾಗೂ ತಾಲೂಕಿನಲ್ಲಿ ಪಕ್ಷವನ್ನು ಬಲವರ್ಧನೆ ಮಾಡುವ ಸಲುವಾಗಿ ತಾಲೂಕು ಅಧ್ಯಕ್ಷದ ಜವಾಬ್ದಾರಿ ಕೇಳಿರುವುದು ನಿಜ. ಪ್ರಯತ್ನ ನಮ್ಮದು, ಪ್ರತಿಫಲ ಭಗವಂತನದು. ಎಲ್ಲರ ಒಮ್ಮತದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ ಎಂದರು..
ತಾಲೂಕಿನಲ್ಲಿ ಪಕ್ಷ ಸಂಘಟನೆಗೆ ಮತ್ತಷ್ಟು ಚುರುಕು ನೀಡಲು ನನಗೆ ಸಮಯ ನಿಗದಿ ಮಾಡಿ, ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಅದಕ್ಕಾಗಿ ನಾವು ಶೀಘ್ರದಲ್ಲೇ ಸಭೆ ಸೇರಿ ಸಮಯವನ್ನು ನಿಗದಿ ಮಾಡಿ ನಿಖಿಲ್ ಕುಮಾರಸ್ವಾಮಿ ಅವರನ್ನು ತಾಲೂಕಿಗೆ ಕರೆಸಿ ಪಕ್ಷ ಸಂಘಟನೆಗೆ ಚುರುಕು ನೀಡುತ್ತೇವೆ ಎಂದರು.
ಮುಂಬರುವ ದಿನಗಳಲ್ಲಿ ಸಾಲು ಸಾಲು ಚುನಾವಣೆಗಳು ಎದುರಾಗುತ್ತಿವೆ. ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ನಗರಸಭೆ ಚುನಾವಣೆ ವಿಧಾನಸಭಾ ಚುನಾವಣೆಗಳಿಗೆ ಈಗಿನಿಂದಲೇ ನಾವು ಸಿದ್ಧಗೊಳಿಸುವ ಅನಿರ್ವಾಯತೆ ಇದೆ. ಇದಕ್ಕೆ ಸೂಕ್ತ ನಿರ್ದೇಶನ ಹಾಗೂ ಎರಡು ರಾಷ್ಟ್ರೀಯ ಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಲು ತಾಲೂಕಿಗೆ ಅತಿ ಶೀಘ್ರದಲ್ಲಿ ನಿಖಿಲ್ ಕುಮಾರಸ್ವಾಮಿ ಬರಲಿದ್ದಾರೆ ಎಂದರು…
ಪಕ್ಷ ಸಂಘಟನೆ ನಿರಂತರವಾಗಿ ನಡೆಯುತ್ತಲೇ ಇರುತ್ತದೆ. ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರ ಮಾರ್ಗದರ್ಶನದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ನಿಖಿಲ್ ಕುಮಾರಸ್ವಾಮಿ ಹಾಗೂ ಪಕ್ಷದ ನಾಯಕರು, ಮುಖಂಡರು, ಕಾರ್ಯಕರ್ತರ ಸಮ್ಮುಖದಲ್ಲಿ ಪಂಚರತ್ನ ರಥಯಾತ್ರೆ, ಜಲಧಾರೆ ಯಾತ್ರೆ, ಮೈಸೂರಿನಲ್ಲಿ ನಡೆದ ದೊಡ್ಡ ಸಮಾವೇಶ ಹೀಗೆ ಸಭೆ, ಸಮಾವೇಶ, ಯಾತ್ರೆಗಳು ಸೇರಿದಂತೆ ಇತರೆ ಕಾರ್ಯಕ್ರಮಗಳ ಮೂಲಕ ಪಕ್ಷ ಸಂಘಟನೆ ಮಾಡಲಾಗುತ್ತಿದೆ ಎಂದರು.
ಕಾಂಗ್ರೆಸ್ ಗ್ಯಾರಂಟಿಗಳಿಂದ ಗೆದ್ದು, ಇದೀಗ ಜನರಿಗೆ ಅನ್ಯಾಯ ಮಾಡುತ್ತಿದೆ. ಜನರನ್ನು ಬೀದಿಪಾಲು ಮಾಡುತ್ತಿದ್ದಾರೆ. ಉದ್ಯೋಗ ಸೃಷ್ಠಿಯಾಗುತ್ತಿಲ್ಲ. ಬಡತನ ನಿರ್ಮೂಲನೆ ಆಗುತ್ತಿಲ್ಲ ಎಂದು ಗುಡುಗಿದರು.
ಬೆಂಗಳೂರು ನಗರದಲ್ಲಿ ಜೆಡಿಎಸ್ ಇಲ್ಲ ಅಂದುಕೊಂಡಿದ್ದಾರೆ. ಕೇವಲ ಬೆರಳೆಣಿಕೆ ಶಾಸಕರು ಇದ್ದಾರೆ ಅಂದುಕೊಂಡಿದ್ದಾರೆ. ಆದರೆ, ಜೆಡಿಎಸ್ ಗೆ 25 ವರ್ಷ ತುಂಬಿದ ಹಿನ್ನೆಲೆ ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಬೆಂಗಳೂರಿನ ಕೊಮ್ಮಘಟ್ಟದ ಬಳಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಸಮಾವೇಶದಲ್ಲಿ 1 ಲಕ್ಷ ಹೆಚ್ಚು ಜನ ಭಾಗಿಯಾಗಿದ್ರು. ಮಾಜಿ ಪ್ರಧಾನಿ ದೇವೇಗೌಡರು, ಕೇಂದ್ರ ಸಚಿವ ಕುಮಾರಸ್ವಾಮಿ, ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿ ಪಕ್ಷ ಹಾಲಿ, ಮಾಜಿ, ಶಾಸಕರು, ಸಂಸದರು ಭಾಗಿಯಾಗಿದ್ದರು. ಇದು ಎರಡೂ ರಾಷ್ಟ್ರೀಯ ಪಕ್ಷಗಳ ನಿದ್ದೆಗೆಡೆಸುವ ಬೃಹತ್ ಸಮಾವೇಶವಾಗಿತ್ತು ಎಂದರು.