
ದೊಡ್ಡಬಳ್ಳಾಪುರ ತಾಲೂಕಿನ ಮಧುರನಹೊಸಹಳ್ಳಿ ಕಾಲೋನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಪಟಾಕಿ ಸಿಡಿಸಿ, ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ತಮಟೆ ವಾದ್ಯದ ಮೂಲಕ ಅದ್ಧೂರಿಯಾಗಿ ಆಚರಿಸಲಾಯಿತು.

ಕಾಲೋನಿ ನಿವಾಸಿಗಳಾದ ಹಿರಿಯರು, ಮಹಿಳೆಯರು, ಯುವಕ-ಯುವತಿಯರು ಹಾಗೂ ಮಕ್ಕಳು ಲವಲವಿಕೆಯಿಂದ ಭಾಗಿಯಾಗಿದ್ದರು.
ನಂತರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದವರಿಗೆ ಅನ್ನ ಪ್ರಸಾದ ವಿತರಣೆ ಮಾಡಲಾಯಿತು.
ಒಟ್ಟಾರೆ, . ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ಕಾಲೋನಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.