
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN Infocity ಫೀಡರ್ನಲ್ಲಿ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಸದರಿ ಫೀಡರ್ನ ಮಾರ್ಗಗಳಲ್ಲಿ ಬೆಳಿಗ್ಗೆ 9ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಿರುತ್ತದೆ. ಆದ್ದರಿಂದ ಗ್ರಾಹಕರು ಸಹಕರಿಸಬೇಕೆಂದು ಬೆಸ್ಕಾಂ ಇಲಾಖೆ ಕೋರಲಾಗಿದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು:
ರಘುನಾಥಪುರ, ಸ್ಕೌಟ್ ಕ್ಯಾಂಪ್ ರಸ್ತೆ, ಶಾಂತಿನಗರ, ದರ್ಗಾಜೋಗಿಹಳ್ಳಿ, ಜಾಲಪ್ಪ ಕಾಲೇಜ್ ರಸ್ತೆ, ಕರೇನಹಳ್ಳಿ, ಇಸ್ಲಾಂಪುರ, ನಾಗದೇನಹಳ್ಳಿ, ಮೋಪರಹಳ್ಳಿ, ಆದಿನಾರಾಯಣ ಹೊಸಹಳ್ಳಿ, ಹಮಾಮ್, ಶಿವಪುರ, ಸೊಣ್ಣಪ್ಪನಹಳ್ಳಿ, ಕೊನಘಟ್ಟಾ, ಲಿಂಗನಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.