
ಇತ್ತೀಚೆಗೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ಉದ್ಯೋಗದ ನೆಪದಲ್ಲಿ ಹೆಣ್ಣುಮಕ್ಕಳನ್ನು ಬಲವಂತಾಗಿ ಮತಾಂತರ ಮಾಡುವ ವಿಚಾರ ದೊಡ್ಡ ದುರಂತ ಪ್ರಕರಣವಾಗಿದೆ. ಇದರ ವಿರುದ್ಧ ದೇಶಾದ್ಯಂತ ಕಂಪನಿಗಳಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ವಿಶ್ವ ಹಿಂದು ಪರಿಷತ್ ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಮಿಲಿಂದ್ ಪಾರಂಡೆ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಮತಾಂತರ ಮಾಡುವ ಜಾಲಗಳು ಹೆಚ್ಚಾಗುತ್ತಿದ್ದು, ಇದರ ವಿರುದ್ಧ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಬೇಕಿದೆ ಎಂದರು.
ಪೆಹಲ್ಗಾಮ್ ಹತ್ಯಾಕಾಂಡ ನಡೆದು ಒಂದು ವರ್ಷ ಕಳೆದಿದೆ. ಹತ್ಯಾಕಾಂಡದ ವೇಳೆ ನೀನು ಹಿಂದು ನಾ ಎಂದು ಕೇಳಿ ದಾಳಿ ಮಾಡಲಾಗಿತ್ತು. ಹೀಗಾಗಿ ಮುಸ್ಲಿಂ ಬಾಂಧವರ ಯುವ ಪಿಳೀಗೆಗೆ ಉತ್ತಮ ನಡವಳಿಕೆ, ಸಂಸ್ಕಾರ ನೀಡುವಂತ ಕಾರ್ಯ ಆಗಬೇಕಿದೆ ಎಂದರು.
ಇನ್ನೂ ಗೋವುಗಳ ಸಂತತಿ ಕಡಿಮೆಯಾಗುತ್ತಿದೆ. ಗೋವುಗಳ ಸ್ಮಗ್ಲಿಂಗ್ ಹೆಚ್ಚಾಗಿ ನಡೆಯುತ್ತಿದೆ. ಇದರ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ. ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರನ್ನ ದುರುದ್ದೇಶಪೂರ್ವಕವಾಗಿ ಗುರಿಯಾಗಿಸಿ ಪ್ರಕರಣಗಳನ್ನು ದಾಖಲು ಮಾಡಲಾಗುತ್ತಿದೆ. ಪೊಲೀಸ್ ಇಲಾಖೆ ಮೇಲೆ ಒತ್ತಡ ಹೇರಿ ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್ ಗಳನ್ನು ಹಾಕಲಾಗುತ್ತಿದೆ. ಇಂತಹ ದ್ವೇಷ ಕೆಲಸವನ್ನು ಬಿಡಬೇಕು. ಮುಂದಿನ ನವೆಂಬರ್ ನಲ್ಲಿ ಒಂದು ಕೋಟಿ ಹಿಂದು ಕಾರ್ಯಕರ್ತರ ನೊಂದಣಿ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದರು.
ವಿಹಿಂಪ ದಕ್ಷಿಣ ಪ್ರಾಂತ ಅಧ್ಯಕ್ಷ ದೀಪಕ್ ರಾಜ್ ಗೋಪಾಲ್, ದಕ್ಷಿಣ ಪ್ರಾಂತ ಕಾರ್ಯದರ್ಶಿ ಬಿ.ಇ ಸುರೇಶ್, ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ ವೆಲ್, ಕೋಲಾರ ವಿಭಾಗ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಗೌರಿ ಶಂಕರ್ ಮತ್ತಿತ್ತರರು ಇದ್ದರು.