ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ ಕಾರಣ ಕತ್ತಲಲ್ಲಿ ಎದುರು ಅಪಘಾತ ಸಂಭವಿಸಿ ಯುವಕರಿಬ್ಬರು ದುರ್ಮರಣ ಹೊಂದಿದ್ದಾರೆ ಎಂದು ಮೃತರ ಸಂಬಂಧಿಕರು ಆರೋಪಿಸಿದ್ದರು. ಈ ಕುರಿತು ಪಬ್ಲಿಕ್ ಮಿರ್ಚಿ ವರದಿ ಮಾಡಿತ್ತು.‌ ವರದಿ ಬೆನ್ನಲ್ಲೇ ಕೂಡಲೇ ಎಚ್ಚೆತ್ತ ನಗರಸಭೆ ಅಧಿಕಾರಿಗಳು ಬೀದಿ ದೀಪ ಸರಿಪಡಿಸಿ, ನೂತನವಾಗಿ ಬಲ್ಬ್ ಅಳವಡಿಸುವ ಕೆಲಸ ನಡೆಸಲಾಗುತ್ತಿದೆ…

ಘಟನೆ ವಿವರ

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಏ.25 ರಾತ್ರಿ ಸುಮಾರು 11:30ರಲ್ಲಿ ದೊಡ್ಡಬಳ್ಳಾಪುರ ನಗರದ ಕೋರ್ಟ್ ರಸ್ತೆಯಲ್ಲಿ ನಡೆದಿದೆ…

ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ಠಾಣಾ ವ್ಯಾಪ್ತಿಯ‌ ನಾಮಗೊಂಡ್ಲು ಗ್ರಾಮದ ನಾಗೇಶ್ (29) ಸ್ಥಳದಲ್ಲೇ ಸಾವು, ಮಂಡ್ಯ ಜಿಲ್ಲೆಯ ಪಾಂಡುಪುರ ತಾಲೂಕಿನ ಅರಳುಗುಪ್ಪೆ ಗ್ರಾಮದ ಮನೋಜ್ (24) ಆಸ್ಪತ್ರೆಯಲ್ಲಿ ಸಾವು.

ಬೈಕ್ ಸವಾರರು ಹೆಲ್ಮೆಟ್ ಧರಿಸದ ಕಾರಣ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದರು.

 

ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Leave a Reply

Your email address will not be published. Required fields are marked *

error: Content is protected !!