ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೋರ್ಸ್ ಗಳ ದಾಖಲಾತಿಗಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2026-27ನೇ ಸಾಲಿನ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ಪಿ.ಸಿ.ಎಂ.ಟಿ ಹಾಗೂ ಪಿ.ಸಿ.ಎಂ.ಸಿ ಕೋರ್ಸ್‌ಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ. 75% ರಷ್ಟು ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ. 25% ರಷ್ಟು ಸ್ಥಾನಗಳನ್ನು ವರ್ಗವಾರು ಮೀಸಲಿರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು 2 ಮೇ. 2026 ರ ಮೇ. 2 ರಂದು ಕೊನೆಯ ದಿನವಾಗಿದೆ.

ಜಿಲ್ಲೆಯ ಈ ಕೆಳಕಂಡ ವಸತಿ ಕಾಲೇಜುಗಳಲ್ಲಿ ಅರ್ಜಿಯನ್ನು ವಿತರಿಸಲಾಗುವುದು.

1. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಜಡಿಗೇನಹಳ್ಳಿ, ಹೊಸಕೋಟೆ ತಾಲ್ಲೂಕು.

2. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು.

3. ಅಟಲ್ ಬಿಹಾರಿ ವಾಜಪೇಯಿ ವಿಜ್ಞಾನ ಪದವಿ ಪೂರ್ವ ಕಾಲೇಜು ಬೊಮ್ಮಾವಾರ, ದೇವನಹಳ್ಳಿ ತಾಲ್ಲೂಕು.

4. ಡಾ.ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ದೊಡ್ಡೇರಿ (ಸೋಂಪುರ), ನೆಲಮಂಗಲ ತಾಲ್ಲೂಕು ಹಾಗೂ ಆನ್ ಲೈನ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಆನ್ ಲೈನ್ ಮೂಲಕ ಸಲ್ಲಿಸುವ https://kreisportal.karnataka.gov.in/ipuappin/forms/online1

ಹೆಚ್ಚಿನ ಮಾಹಿತಿಗಾಗಿ ಶ್ರೀಮತಿ ಶ್ರೀ ಕಿರಣ್ ಕುಮಾರ್ ಎನ್. ಪ್ರಾಂಶುಪಾಲರು- 9110256424, ಶ್ರೀಮತಿ ನಾಗರತ್ನ ಪ್ರಾಂಶುಪಾಲರು- 8105526933, ಗಿರೀಶ್ ಎ.ಓ ಪ್ರಾಂಶುಪಾಲರು- 8660152639, ಶ್ರೀಮತಿ ಲೀಲಾ ಪ್ರಾಂಶುಪಾಲರು- 6495812105 ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ
ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಶ್ರೀಮತಿ ಟಿ.ಎಲ್.ಎಸ್ ಪ್ರೇಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!