ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾ- ಬೆಂ ಗ್ರಾ ಜಿಪಂ ಸಿಇಒ ಡಾ. ವಾಸಂತಿ ಅಮರ್ ಬಿ.ವಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ 101 ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ತಲೆದೂರದಂತೆ ಹೆಚ್ಚಿನ ನಿಗಾವಹಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಪಂ ಮುಖ್ಯ ಕಾರ್ಯನಿರ್ವಹಣಾಕಾರಿ ಡಾ. ವಾಸಂತಿ ಅಮರ್ ಬಿ.ವಿ ತಿಳಿಸಿದರು.

ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದಲ್ಲಿನ ಜಿಲ್ಲಾಡಳಿತ ಭವನದಲ್ಲಿ ಬೇಸಿಗೆ ಹಿನ್ನೆಲೆಯಲ್ಲಿ ಆರಂಭಿಸಲಾದ ಕಂಟ್ರೋಲ್ ರೂಂಗೆ ಭೇಟಿ ನೀಡಿ, ಸಹಾಯವಾಣಿಗೆ ಬಂದ ಕರೆಗಳ ಬಗ್ಗೆ ಮಾಹಿತಿ ಪಡೆದು ಮಾತನಾಡಿದರು.

ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಪಂ ವತಿಯಿಂದ ಬೇಸಿಗೆ ಅವಧಿಯಲ್ಲಿ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಜಿಲ್ಲೆಯ ಯಾವುದೇ ಗ್ರಾಪಂ ವ್ಯಾಪ್ತಿಯಲ್ಲಿ ಸಮಸ್ಯೆಗಳು ಬಂದಲ್ಲಿ ಕರೆ ಮಾಡಲು 08022221050 ಸಹಾಯವಾಣಿಯನ್ನು ಆರಂಭಿಸಲಾಗಿದೆ. ಸಹಾಯವಾಣಿಗೆ ಸಿಬ್ಬಂದಿ ನೇಮಕ ಮಾಡಲಾಗಿದೆ. ಜನರು ಯಾವುದೇ ಗ್ರಾಮದಲ್ಲಿ ನೀರಿನ ಸಮಸ್ಯೆ ಆದಲ್ಲಿ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಬಂದ ಕರೆಯನ್ನು ಆಧರಿಸಿ ಶೀಘ್ರವಾಗಿ ಸ್ಪಂದಿಸಲಾಗುತ್ತಿದೆ ಎಂದರು.

ಬೇಸಿಗೆ ನೀರಿನ ನಿರ್ವಹಣೆಯ ಬಗ್ಗೆ ವಾಟ್ಸ್ಆಪ್ ಗ್ರೂಪ್ ಮಾಡಲಾಗಿದ್ದು, ಕರೆಗಳು ಬಂದ ಕೂಡಲೇ ಆಯಾ ಗ್ರಾಮಗಳಿಗೆ ಭೇಟಿ ನೀಡಿ, ಅಲ್ಲಿ ನೀರಿನ ಸಮಸ್ಯೆಗಳ ಬಗ್ಗೆ ತಿಳಿಯಲಾಗುತ್ತಿದ್ದು, ಅಗತ್ಯ ಕ್ರಮವಹಿಸಲಾಗುತ್ತಿದೆ. ಎಂದರು.

ಜಿಲ್ಲೆಯಲ್ಲಿ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆಯೊಂದಿಗೆ ಸನ್ನದ್ಧವಾಗಿದೆ.  ಮುಂದಿನ 2 ತಿಂಗಳವರೆಗೂ ಕೂಡ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಲಾಗಿದೆ. ಈಗಾಗಲೇ ಬೋರ್‌ವೆಲ್, ಟ್ಯಾಂಕರ್‌ಗಳ ಮೂಲಕ ನೀರಿನ ಪೂರೈಕೆಗೆ ಅಗತ್ಯ ಕ್ರಮವಹಿಸಲಾಗಿದೆ ಎಂದರು.

ಸಹಾಯವಾಣಿಗೆ 94 ಕರೆಗಳು

ಜಿಲ್ಲಾಡಳಿತ ಭವನದಲ್ಲಿ ಬೇಸಿಗೆ ಹಿನ್ನೆಲೆ ಆರಂಭಿಸಲಾಗಿರುವ ಕಂಟ್ರೋಲ್ ರೂಂನಲ್ಲಿ ಸಹಾಯವಾಣಿ ತೆರೆಯಲಾಗಿದ್ದು, ಈವರೆಗೆ ಜಿಲ್ಲೆಯ 4 ತಾಲೂಕುಗಳಿಂದ ವಿವಿಧ ಒಟ್ಟು 94 ಕರೆಗಳು ಬಂದಿದೆ. ಜನರ ಸಮಸ್ಯೆಗಳಿಗೆ ಅಗತ್ಯ ಕ್ರಮವಹಿಸಿ, ತಕ್ಷಣ ಪರಿಹರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸಲಾಗಿದೆ.

ಈ ವೇಳೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಿವುಕುಮಾರ್, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿ ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!