ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್ ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

ರಸ್ತೆಯಲ್ಲಿ ಕೊಳಚೆ ನೀರು ಹರಿಯುತ್ತಿರುವ ಹಿನ್ನೆಲೆ, ಸ್ಥಳದಲ್ಲಿ ಪಾದಾಚಾರಿಗಳು ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ನಗರಸಭೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು ಏನೂ ಪ್ರಯೋಜನವಾಗಿಲ್ಲ. ಮನೆಯ ಮುಂದೆ ಕಾಲಿಟ್ಟರೆ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನ ದುರ್ವಾಸನೆಯಿಂದಾಗಿ ಜನರು ಬೇಸತ್ತಿದ್ದಾರೆ. ಮನೆಯ ಮುಂದೆ ಮ್ಯಾನ್ ಹೋಲ್ ನೀರು ಹರಿಯುತ್ತಿರುವ ಕಾರಣ ಸಾವಿರಾರು ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಇದು ಹೀಗೆ ಬಿಟ್ಟರೆ ಎಲ್ಲರಿಗೂ ಕಾಲಯಿಲೆ ಬರುವುದು ಖಚಿತ ಎಂದು ಇಲ್ಲಿನ‌ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!