ಪಬ್ಲಿಕ್ ಮಿರ್ಚಿ ಫಲಶೃತಿ: ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಜವಾಬ್ದಾರಿ ಹೊತ್ತ ಪ.ಪಂ

ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಬಿಸುವನಹಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಪಂಚಾಯಿತಿಯಿಂದ ನಿರ್ವಹಣೆ ಮಾಡದೇ ಖಾಸಗಿ ವ್ಯಕ್ತಿಗಳಿಗೆ ಟೆಂಡರ್ ನೀಡಲಾಗಿತ್ತು. ಇದರ ಪರಿಣಾಮ ಖಾಸಗಿ ಟೆಂಡರ್ ದಾರರು ನೀಡಿರುವ ಕಾರ್ಡುಗಳಿಗೆ ಒಂದು ತಿಂಗಳಿಂದ ರಿಚಾಜ್೯ ಮಾಡದೇ ಇರುವ ಪರಿಣಾಮ ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿತ್ತು. ಈ ಕುರಿತು ಮೇ.6ರಂದು “ಪಬ್ಲಿಕ್ ಮಿರ್ಚಿ” ವರದಿ ಮಾಡಿತ್ತು. ವರದಿ ಬೆನ್ನಲ್ಲೇ ಎಚ್ಚೆತ್ತ ಪ.ಪಂ ಸೂಕ್ತ ಕ್ರಮಕೈಗೊಂಡಿದೆ.

ಖಾಸಗಿಯವರಿಗೆ ನೀಡಿದ್ದ ನಿರ್ವಹಣಾ ಜವಾಬ್ದಾರಿಯನ್ನು ಹಿಂಪಡೆದು ಪಟ್ಟಣ ಪಂಚಾಯಿತಿಯೇ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆ ಜವಾಬ್ದಾರಿ ಹೊತ್ತಿದೆ..

ಪಬ್ಲಿಕ್ ಮಿರ್ಚಿ ವರದಿಗಾರಿಕೆಗೆ ಕಸುವನಹಳ್ಳಿ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ..

ಈ ಕುರಿತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಮುಖ್ಯ ಆಡಳಿತಾಧಿಕಾರಿ ನರಸಿಂಹ ಮೂರ್ತಿ ಮಾತನಾಡಿ, ಶುದ್ಧ ಕುಡಿಯುವ ನೀರಿನ ಘಟಕ ನಿರ್ವಹಣೆ ಜವಾಬ್ದಾರಿಯನ್ನು ಖಾಸಗಿಯವರಿಗೆ ನೀಡಲಾಗಿತ್ತು.‌ ಅವರು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡದ ಹಿನ್ನೆಲೆ ಅವರ ಬದಲಿಗೆ‌ ಇದೀಗ ನಾವೇ ನಿರ್ವಹಣೆ ಮಾಡುತ್ತಿದ್ದೇವೆ. ಕಾರ್ಡ್ ರಿಚಾರ್ಜ್, ಕಾಯಿನ್ ವ್ಯವಸ್ಥೆಯಿಂದ ನೀರು ಪಡೆಯಲು ಅವಕಾಶ ಕಲ್ಪಿಸಲಾಗಿದೆ.‌ ಇನ್ನು ಮುಂದೆ ಜನರ ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗುವುದಿಲ್ಲ. ರಿಚಾರ್ಜ್ ಮಾಡಿಕೊಳ್ಳಲು ಸ್ಕ್ಯಾನರ್ ಸ್ಥಳದಲ್ಲಿ ಅಂಟಿಸಲಾಗಿದೆ. ಒಂದು ವೇಳೆ ರಿಚಾರ್ಜ್ ಮಾಡಿಕೊಳ್ಳಲು ಬರದಿದ್ದಲ್ಲಿ ವಾಟರ್ ಮೆನ್ ಸಹಾಯ ಪಡೆಯಬಹುದಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!