ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸ್ತಿದ್ದ ಆರೋಪಿಗಳ ಬಂಧನ

ಬೆಂಗಳೂರು: ಜಿಂಕೆ ಕೊಂಬುಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿಸಿಬಿ ಹಾಗೂ ಚಿಕ್ಕಬಾಣಾವರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಮುರಳಿ, ಮಂಜುನಾಥ್ ಹಾಗೂ ಕಾರ್ಯಪ್ಪ ಎಂದು ಗುರುತಿಸಲಾಗಿದೆ.

ಆರೋಪಿಗಳು ತುಮಕೂರಿನಿಂದ ಬೆಂಗಳೂರಿಗೆ ಜಿಂಕೆ ಕೊಂಬುಗಳನ್ನು ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಅಧಿಕಾರಿಗಳು ಹಾಗೂ ಚಿಕ್ಕಬಾಣಾವರ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದು, ಅವರ ಬಳಿ ಇದ್ದ ಜಿಂಕೆ ಕೊಂಬುಗಳನ್ನು ಜಪ್ತಿ ಮಾಡಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಅಕ್ರಮ ವನ್ಯಜೀವಿ ಉತ್ಪನ್ನಗಳ ಮಾರಾಟ ಜಾಲದ ಸಂಪರ್ಕ ಇರುವ ಸಾಧ್ಯತೆ ವ್ಯಕ್ತವಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!