ದೇಶದ ಅಭಿವೃದ್ಧಿಗೆ ದೇವೇಗೌಡರ ಸೇವೆ ಅಗತ್ಯ: ದೇವೇಗೌಡರು ರಾಜ್ಯಸಭೆಯಲ್ಲಿ ಮುಂದುವರಿಯಲಿ- ಬಿ.ಮುನೇಗೌಡ ಒತ್ತಾಯ

ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ ಬಿ. ಮುನೇಗೌಡ ಅವರು ವಿಶೇಷ ಪೂಜೆ ಸಲ್ಲಿಸಿದರು.

ದೊಡ್ಡಬಳ್ಳಾಪುರ ತಾಲೂಕಿನ ಎಸ್.ಎಸ್. ಘಾಟಿ ಸುಬ್ರಹ್ಮಣ್ಯ ದೇವಾಲಯ ಸಮೀಪದ ದೇವರ ಬೆಟ್ಟ ಶ್ರೀ ವಿಶ್ವ ಶನೇಶ್ವರ ಸ್ವಾಮಿ‌ ದೇವಸ್ಥಾನದಲ್ಲಿ ಇಂದು ನಡೆದ ಪೂಜಾ ಕಾರ್ಯಕ್ರಮದಲ್ಲಿ ದೇವೇಗೌಡರ ಆರೋಗ್ಯ, ಆಯುಷ್ಯ ಹಾಗೂ ರಾಜ್ಯದ ಜನರ ಸುಖಶಾಂತಿಗಾಗಿ ಪ್ರಾರ್ಥಿಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಬಿ. ಮುನೇಗೌಡ ಅವರು, ದೇಶದ ರಾಜಕೀಯ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ದೇವೇಗೌಡರು ನೀಡಿರುವ ಕೊಡುಗೆ ಅಪಾರವಾಗಿದ್ದು, ರೈತರು ಹಾಗೂ ಸಾಮಾನ್ಯ ಜನರ ಪರವಾಗಿ ಅವರು ಸದಾ ಧ್ವನಿಯಾಗಿದ್ದಾರೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರು ಅನೇಕ ಸಮಯ ಸಂದರ್ಭಗಳಲ್ಲಿ ಸಲಹೆಗಳನ್ನು ನೀಡುತ್ತಾ ಬಂದಿದ್ದಾರೆ. ದೇವೇಗೌಡರ ಅನುಭವವನ್ನು ಆಡಳಿತದಲ್ಲಿ ಸಾಕಷ್ಟು ಬಳಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿಯ ದೃಷ್ಟಿಯಿಂದ ಎಚ್.ಡಿ ದೇವೇಗೌಡರಿಗೆ ಬಿಜೆಪಿ ವರಿಷ್ಠರು ರಾಜ್ಯಸಭೆಗೆ ಮತ್ತೊಮ್ಮೆ ಅವಕಾಶ ಮಾಡಿಕೊಡಬೇಕು. ಈ ಮೂಲಕ ಎನ್.ಡಿ.ಎ ಮೈತ್ರಿಗೆ ಬಲ ತುಂಬಬೇಕು ಎಂದು ಹೇಳಿದರು.

ದೇವೇಗೌಡರ ಸೇವೆ ದೇಶಕ್ಕೆ ಮತ್ತಷ್ಟು ಸಿಗಬೇಕಾದರೆ ಅವರಿಗೆ ರಾಜ್ಯಸಭೆಗೆ ಆಯ್ಕೆಯಾಗಬೇಕು. ಇದಕ್ಕೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರು ಒಮ್ಮತದಿಂದ ತೀರ್ಮಾನ ಮಾಡಬೇಕು. ಇಡೀ ಪ್ರಪಂಚದಲ್ಲೇ ಗ್ರಾಮ ಪಂಚಾಯತಿ ಸದಸ್ಯನಿಂದ ದೇಶದ ಪ್ರಧಾನಿ ಮಂತ್ರಿಯಾಗಿ ಜನರ ಸೇವೆ ಮಾಡಿದವರು ಎಚ್.ಡಿ ದೇವೇಗೌಡ ಮಾತ್ರ. ರಾಜ್ಯ ಸೇರಿದಂತೆ ದೇಶಾದ್ಯಂತ ನೀರಾವರಿ ಯೋಜನೆಗಳ ಜಾರಿ ಮಾಡುವ ಮೂಲಕ ರೈತಾಪಿ ವರ್ಗಕ್ಕೆ ಹೆಚ್ಚಿನ ಸೌಲಭ್ಯ ನೀಡಿದ್ದಾರೆ ಎಂದರು.

ಇಳಿವಯಸ್ಸಿನಲ್ಲೂ ಜನರ ನಾಡಮಿಡಿತ ಅರಿತು ಜನಪರ ಕೆಲಸಗಳನ್ನು ಮಾಡುತ್ತಿದ್ದಾರೆ. ರಾಜ್ಯಸಭೆಯಲ್ಲಿ ರಾಜ್ಯದ ಪರವಾಗಿ ಅನೇಕ ವಿಷಯಗಳನ್ನು ಚರ್ಚೆ ಮಾಡಿ ರಾಜ್ಯಕ್ಕೆ ಅನ್ಯಾಯವಾಗದಂತೆ ನೋಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ದೇವೇಗೌಡರ ಹೆಸರಿನಲ್ಲಿ ವಿಶ್ವಕಲ್ಯಾಣ ವೆಂಕಟೇಶ್ವರ ಸ್ವಾಮಿಯ ದೇಗುಲದ ಜೀರ್ಣೋದ್ದಾರಕ್ಕೆ ಬೇಕಾಗುವ ಕಲ್ಲುಗಳ ಸೇವೆ ಮಾಡಲಾಗುವುದು ಎಂದು ಅರ್ಚಕರಿಗೆ ಭರವಸೆ ನೀಡಿದರು.

ಈ ಸಂದರ್ಭಸಲ್ಲಿ ಮುಖಂಡರಾದ ಪದ್ಮಾವತಿ, ಅಂಜನ್, ಅರ್ಚಕರಾದ ಶ್ರೀಧರ್ ಶರ್ಮಾ ಗುರೂಜಿ ಮತ್ತಿತ್ತರರು ಇದ್ದರು.

Leave a Reply

Your email address will not be published. Required fields are marked *

error: Content is protected !!