860 ಗ್ರಾಂ ಒಣ ಗಾಂಜಾ ವಶ: ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಆಂಧ್ರ ಪ್ರದೇಶದಿಂದ ಒಣ ಗಾಂಜಾವನ್ನು ತಂದು ಸ್ಥಳೀಯವಾಗಿ ಮಾರಾಟ ಮಾಡಲು ಯತ್ನಿಸಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಬಂಧಿಸಿ, ಸುಮಾರು 860 ಗ್ರಾಂ ಒಣ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಡಾ. ನವೀನ್ ಕುಮಾರ್ ಎಂ.ಬಿ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನು ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಮನೆಯಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಒಣ ಗಾಂಜಾವನ್ನು ಸಂಗ್ರಹಿಸಿಟ್ಟಿದ್ದನು ಎನ್ನಲಾಗಿದೆ.

ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಗಾಂಜಾವನ್ನು ಸೀಜ್ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಪಿಎಸ್ಐ ಸುಮಂತ್, ಪ್ರೀತಿ ಹಾಗೂ ಸಿಬ್ಬಂದಿ ಚಂದ್ರು, ಸುನಿಲ್ ಬಾಸಗಿ, ನಟರಾಜ್ ಮತ್ತು ಪ್ರವೀಣ್ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!