ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ.

ಮೃತರನ್ನು ಚೈತನ್ಯನಗರ ನಿವಾಸಿ ಮೀನಾಕ್ಷಿ ಎಂ ಎಂದು ಗುರುತಿಸಲಾಗಿದೆ.

ಮೇ 22ರಂದು ಸಂಜೆ ಸುಮಾರು 6:30ರ ವೇಳೆಗೆ ಮೀನಾಕ್ಷಿಯವರು ತಮ್ಮ ಮನೆಯಲ್ಲಿ ಫ್ರಿಡ್ಜ್ ಕ್ಲೀನ್ ಮಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡು ಅವರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

ತಕ್ಷಣ ಕುಟುಂಬಸ್ಥರು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದೇ ವೇಳೆ, ವಿದ್ಯುತ್ ಉಪಕರಣಗಳನ್ನು ಬಳಸುವಾಗ ಹಾಗೂ ಸ್ವಚ್ಛಗೊಳಿಸುವ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!