
ನವದೆಹಲಿ: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತೆ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ಬಿದ್ದಿದೆ. ಕೇಂದ್ರ ಸರ್ಕಾರ 11 ದಿನಗಳ ಅವಧಿಯಲ್ಲಿ ನಾಲ್ಕನೇ ಬಾರಿ ಇಂಧನ ದರ ಹೆಚ್ಚಳ ಮಾಡಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಗೆ ಬಂದಿವೆ.
ಈ ಬಾರಿ ಪೆಟ್ರೋಲ್ ದರವನ್ನು ಲೀಟರ್ಗೆ ರೂ.2.61 ಹಾಗೂ ಡೀಸೆಲ್ ದರವನ್ನು ಲೀಟರ್ಗೆ ರೂ.2.71 ಹೆಚ್ಚಳ ಮಾಡಲಾಗಿದೆ. ನಿರಂತರವಾಗಿ ಏರಿಕೆಯಾಗುತ್ತಿರುವ ಇಂಧನ ದರಗಳಿಂದ ಸಾರ್ವಜನಿಕರಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.
ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ ರೂ.102.12ಕ್ಕೆ ಏರಿಕೆಯಾಗಿ ಮೊದಲ ಬಾರಿಗೆ 100 ರೂಪಾಯಿ ಗಡಿ ದಾಟಿದೆ. ಅಲ್ಲದೆ ಡೀಸೆಲ್ ದರ ಲೀಟರ್ಗೆ ರೂ.95.20 ಆಗಿದೆ.
ಇನ್ನು ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ದರ ಲೀಟರ್ಗೆ ರೂ.110.61 ಆಗಿದ್ದರೆ, ಡೀಸೆಲ್ ದರ ರೂ.98.54ಕ್ಕೆ ಏರಿಕೆಯಾಗಿದೆ. ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚುವ ಸಾಧ್ಯತೆ ಇದ್ದು, ಅಗತ್ಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಆತಂಕ ಎದುರಾಗಿದೆ.
ಪೆಟ್ರೋಲ್ ಮತ್ತು ಡೀಸೆಲ್ ದರಗಳ ನಿರಂತರ ಏರಿಕೆಯಿಂದ ಸಾಮಾನ್ಯ ಜನತೆ ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ದರ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.