ಮಕ್ಕಳ ಆಧಾರ್ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಸೆ.30 ರವರೆಗೆ ಅವಕಾಶ

ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅಪ್ಡೇಟ್ ಮಾಡಲು ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30 ರವರೆಗೆ ಅವಕಾಶ ಕಲ್ಪಿಸಲಾಗಿದೆ.

5 ರಿಂದ 17 ವಯೋಮಿತಿಯ ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ.

ಇದರಿಂದಾಗಿ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದ್ದು ಪೋಷಕರು ಇದರ ಸದುಪಯೋಗ ಪಡಿಸಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!