ಸಿಎಂ ಪಟ್ಟ ತ್ಯಜಿಸಿದ ಸಿದ್ದರಾಮಯ್ಯ: ರಾಜೀನಾಮೆ ಬಳಿಕ ಭಾವನಾತ್ಮಕ ಮಾತು….!

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಲೋಕಭವನದಲ್ಲಿ ರಾಜ್ಯಪಾಲರ ಕಾರ್ಯದರ್ಶಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ತಮ್ಮ ರಾಜೀನಾಮೆಯನ್ನು ದೃಢಪಡಿಸಿದರು ಮತ್ತು 136 ಕ್ಕೂ ಹೆಚ್ಚು ಶಾಸಕರ ಬಲದೊಂದಿಗೆ ತಮ್ಮ ಸರ್ಕಾರವು ಸಂಪೂರ್ಣ ಬಹುಮತವನ್ನು ಹೊಂದಿರುವುದರಿಂದ ಮುಂದಿನ ನಿಯೋಜಿತ ಮುಖ್ಯಮಂತ್ರಿಯನ್ನು ತಮ್ಮ ಸ್ಥಾನಕ್ಕೆ ಆಹ್ವಾನಿಸುವಂತೆ ರಾಜ್ಯಪಾಲರನ್ನು ಕೇಳಿಕೊಂಡಿದ್ದಾರೆ..

ಎರಡು ಬಾರಿ ಕರ್ನಾಟಕದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

550 ಭರವಸೆಗಳಲ್ಲಿ, ಸುಮಾರು 300 ಭರವಸೆಗಳನ್ನು ಇಲ್ಲಿಯವರೆಗೆ ಈಡೇರಿಸಲಾಗಿದೆ, ಜೊತೆಗೆ ಐದು ಗ್ಯಾರಂಟಿಗಳು. ನಾನು ನೀಡಿದ ಭರವಸೆಗಳಿಂದ ವಿಮುಖನಾಗಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಮೇರು ನಟ ರಾಜಕುಮಾರ್ ಅವರು ಅಭಿಮಾನಿ ದೇವರು ಎಂದು ಕರೆಯುತ್ತಿದ್ದರು. ನಾನು ರಾಜಕಾರಣಿ, ನನಗೆ ಸಂವಿಧಾನವೇ ಧರ್ಮವಾಗಿದೆ. ಮತದಾರರೇ ನಮ್ಮ ಅಭಿಮಾನಿ ದೇವರು ಕನ್ನಡ ನಾಡಿನ ಏಳು ಕೋಟಿ ಜನರಿಗೆ ಸೇವೆ ಮಾಡುವ ಅವಕಾಶ ಸಿಕ್ಕಿತ್ತು ಎಂದು ಹೇಳಿದರು.

ನಾನು ಹಳ್ಳಿಯಿಂದ ಬಂದವನು. ಮುಂದೊಂದು ದಿನ ಶಾಸಕನಾಗುತ್ತೇನೆ, ಸಚಿವನಾಗುತ್ತೇನೆ, ಸಿಎಂ ಆಗುತ್ತೇನೆ ಎಂಬ ಕನಸು ಕಂಡಿಲ್ಲ. ರಾಜ ಕಾರಣಕ್ಕೆ ಬಂದಿದ್ದು ಆಕಸ್ಮಿಕವಾಗಿತ್ತು. ರಾಜಕಾರಣಕ್ಕೆ ಬಂದಂದಿನಿಂದ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ತತ್ವದಲ್ಲಿ ನಂಬಿಕೆ ಇಟ್ಟುಕೊಂಡಿದ್ದೆ. ಸಂವಿಧಾನದಲ್ಲಿ ಅಪಾರ ಗೌರವ ಇಟ್ಟುಕೊಂಡವನು ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!