ಬೆಂಗಳೂರಿನಿಂದ‌ ದೆಹಲಿಗೆ ಸಚಿವರ ಪಟ್ಟಿ ತೆಗೆದುಕೊಂಡು ಹೋದ್ರಾ ಡಿ.ಕೆ ಶಿವಕುಮಾರ್..?

ದೇವನಹಳ್ಳಿ:- ರಾಜ್ಯ ರಾಜಕೀಯದಲ್ಲಿ ಸಚಿವ ಸಂಪುಟ ಪುನರ್‌ರಚನೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಕ್ಕೂ ಮುನ್ನ ಡಿಕೆ ಶಿವಕುಮಾರ್ ಕಾರಿನಲ್ಲಿಯೇ ಕೆಲ ಮಹತ್ವದ ದಾಖಲೆಗಳನ್ನು ಪರಿಶೀಲಿಸುತ್ತಿರುವ ದೃಶ್ಯಗಳು ಗಮನ ಸೆಳೆದವು.

ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಅವುಗಳನ್ನು ತಮ್ಮ ಆಪ್ತರ ಕೈಗೆ ನೀಡಿದ ದೃಶ್ಯವೂ ಕಂಡುಬಂದಿದೆ.

ಇದರಿಂದಾಗಿ ನೂತನ ಸಚಿವ ಸಂಪುಟಕ್ಕೆ ಸಂಬಂಧಿಸಿದ ಪಟ್ಟಿಯನ್ನೇ ಡಿಕೆಶಿ ದೆಹಲಿಗೆ ಕೊಂಡೊಯ್ದರಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಹೈಕಮಾಂಡ್ ಒಪ್ಪಿಗೆ ಪಡೆಯಲು ಸಚಿವರ ಪಟ್ಟಿ ಸಿದ್ಧಪಡಿಸಿರುವ ಸಾಧ್ಯತೆಗಳ ಬಗ್ಗೆ ಚರ್ಚೆಗಳು ಜೋರಾಗಿವೆ.

ಮುಖ್ಯಮಂತ್ರಿ ಸ್ಥಾನ ಬದಲಾವಣೆ ಹಾಗೂ ಸಂಪುಟ ಪುನರ್‌ರಚನೆ ವಿಚಾರ ರಾಜ್ಯ ರಾಜಕೀಯದಲ್ಲಿ ಸದ್ದು ಮಾಡುತ್ತಿರುವ ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿ ಮಹತ್ವ ಪಡೆದುಕೊಂಡಿದೆ.

ದೇವನಹಳ್ಳಿಯಿಂದ ಏರ್ ಇಂಡಿಯಾ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿರುವ ಡಿಕೆ ಶಿವಕುಮಾರ್, ಹೈಕಮಾಂಡ್ ನಾಯಕರ ಜೊತೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!