ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅಂಗೀಕಾರ: ಸಚಿವ ಸಂಪುಟವನ್ನೂ ತಕ್ಷಣ ಜಾರಿಗೆ ಬರುವಂತೆ ವಿಸರ್ಜನೆ

ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ.‌‌ ಜೊತೆಗೆ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟವನ್ನೂ ತಕ್ಷಣ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ.

ಸಿದ್ದರಾಮಯ್ಯನವರು ಮೇ.28ರ ಗುರುವಾರದಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ರಾಜ್ಯಪಾಲರು ಪತ್ನಿಯ ಅನಾರೋಗ್ಯದ ಕಾರಣ ಇಂದೋರ್‌ಗೆ ತೆರಳಿದ್ದರಿಂದ, ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದರು.

ಗುರುವಾರ ರಾತ್ರಿ ಬೆಂಗಳೂರಿನಗೆ ವಾಪಸ್ ಆದ ರಾಜ್ಯಪಾಲರು, ಇಂದು ಮುಂಜಾನೆ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!