ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಗೌರಿಬಿದನೂರು ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಕಾರಿನ ಮುಂದೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮೇಲಿನ‌ನಾಯಕರಂಡನಹಳ್ಳಿ ಬಳಿ ಏಕಾಏಕಿ ನಾಯಿ ಬಂದಿದ್ದು, ಅದನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಈ ವೇಳೆ ಕಾರು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿನ ಮುಂಭಾಗ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿದ್ದರು. ಅಪಘಾತದಿಂದ ವಿದ್ಯುತ್ ಕಂಬಕ್ಕೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವ ಸಾಧ್ಯತೆಯಿದೆ.

ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!