ಜೂನ್ 16 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ: ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆ

ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಆಯೋಜನೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ 2022-23 ಹಾಗೂ 2023-24 ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆ.ಡಿ.ಪಿ) ಪ್ರಗತಿ ಪರಿಶೀಲನಾ ಸಭೆಯು ಜೂನ್ 16 ರಂದು ಬೆಳಿಗ್ಗೆ 10.00 ಗಂಟೆಗೆ ದೇವನಹಳ್ಳಿ ತಾಲ್ಲೂಕು, ಬೀರಸಂದ್ರ ಗ್ರಾಮ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.

ಈ ಕುರಿತು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಮಿತಿಯ ಸದಸ್ಯ ಕಾರ್ಯದರ್ಶಿಯಾದ ವರ್ಣೀತ್ ನೇಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *