
ದೇವನಹಳ್ಳಿ ತಾಲೂಕಿನ ರಾಣಿ ಕ್ರಾಸ್ ಬಳಿ ಡ್ಯೂಕ್ ಬೈಕ್ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಧರ್ಮವರಂ ಮೂಲದ ಕೆ. ಜಯಪ್ರಕಾಶ್ (25) ಎಂದು ಗುರುತಿಸಲಾಗಿದೆ.
ಪೊಲೀಸ್ ಮಾಹಿತಿಯ ಪ್ರಕಾರ, ಬೈಕ್ಗೆ ಹಿಂಬದಿಯಿಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ಗೆ ಬಡಿದಿದೆ. ಈ ವೇಳೆ ಜಯಪ್ರಕಾಶ್ ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಜಯಪ್ರಕಾಶ್ ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಪ್ರದೇಶಕ್ಕೆ ಸಿಪಿಯು ದುರಸ್ತಿಗೆ ತೆರಳಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೈಕ್ನಲ್ಲಿದ್ದ ಮತ್ತೊಬ್ಬ ಸವಾರನನ್ನು ಸ್ಥಳೀಯರು ರಕ್ಷಿಸಿದ್ದು, ಗಂಭೀರ ಗಾಯಗಳಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರನ್ನೂ ತಕ್ಷಣ ದೇವನಹಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಘಟನೆ ಹಿನ್ನೆಲೆಯಲ್ಲಿ ಜಯಪ್ರಕಾಶ್ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.