
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ನಡೆದಿದೆ.
11 ವರ್ಷದ ದಕ್ಷಾ, ನಾಲ್ಕು ವರ್ಷದ ಧನುಷ್ ಮೃತಪಟ್ಟ ಮಕ್ಕಳು.
ಗುರುಮೂರ್ತಿ ರವರ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿ ಮುಳುಗಿ ಮೃತರಾಗಿರುತ್ತಾರೆ. ಕೃಷಿ ಹೊಂಡಕ್ಕೆ ಸರಿಯಾಗಿ ಭದ್ರತೆ ಮಾಡದ ಗುರುಮೂರ್ತಿ ವಿರುದ್ಧ 106 BNS ರೀತಿಯ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗಿರುತ್ತದೆ ಎಂದು ಪೊಲೀಸ್ ಇಲಾಖೆಯಿಂದ ಮಾಹಿತಿ ಒದಗಿಬಂದಿದೆ..
ಸ್ಥಳಕ್ಕೆ ಇನ್ಸ್ ಪೆಕ್ಟರ್ ಡಾ.ನವೀನ್ ಕುಮಾರ್ ಎಂ.ಬಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ…