
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬ್ದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಇಂದು ಬೆಳಗ್ಗೆ ಸುಮಾರು 8:30ರಲ್ಲಿ ಘಟನೆ ನಡೆದಿದೆ.

ಕಂಟನಕುಂಟೆ ಗ್ರಾಮದ ನಿವಾಸಿ ಅಶ್ವಿನಿ(31) ಮೃತ ದುರ್ದೈವಿ. ಸಹನಾ ಎಂಬ ಯುವತಿಗೆ ಗಂಭೀರ ಗಾಯಳಾಗಿದ್ದು, ಚಿಂತಾಜನಕ ಪರಿಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ.
ಕೈಗಾರಿಕಾ ಪ್ರದೇಶದ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆ ತೆರಳುವಾಗ ಬೈಕ್ ಗೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…