
ಬಿಡದಿಯ ಖಾಸಗಿ ರೆಸಾರ್ಟ್ ನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು, ಮುಂಬರುವ ವಿಧಾನ ಪರಿಷತ್ ಚುನಾವಣೆ ಹಾಗೂ ಎಸ್‌ಐಆರ್ ಕುರಿತ ಚರ್ಚೆಯಲ್ಲಿ ಸಲಹೆ – ಮಾರ್ಗದರ್ಶನ ನೀಡಿದರು.

ಈ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕರು, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ರಾಜ್ಯ ಸರ್ಕಾರದ ಸಚಿವರು, ಪಕ್ಷದ ಶಾಸಕರು ಉಪಸ್ಥಿತರಿದ್ದರು.