
ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪದ ರೈಲು ಹಳಿಯಲ್ಲಿ ಸುಮಾರು 50 ವರ್ಷದ ಅಪರಿಚಿತ ಮಹಿಳೆಯೊಬ್ಬರು ರೈಲಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಈ ಸಂಬಂಧ ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ UDR ನಂ.108/2026ರಡಿ ಕಲಂ 194 BNSS ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.
ಮೃತ ಮಹಿಳೆಯ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ. ಮಹಿಳೆ ಸುಮಾರು 165 ಸೆಂ.ಮೀ ಎತ್ತರ, ಎಣ್ಣೆ ಕೆಂಪು ಮೈಬಣ್ಣ, ಕೋಲುಮುಖ ಹಾಗೂ ಸಣ್ಣಕಾಯ ಹೊಂದಿದ್ದು, ತಲೆಯಲ್ಲಿ ಸುಮಾರು ಒಂದೂವರೆ ಅಡಿ ಉದ್ದದ ಕಪ್ಪು-ಬಿಳಿ ಮಿಶ್ರಿತ ಕೂದಲು ಹೊಂದಿದ್ದಾರೆ.
ಮಹಿಳೆ ನೇರಳೆ (ಪರ್ಪಲ್) ಬಣ್ಣದ ಚೂಡಿದಾರ್ ಟಾಪ್ ಹಾಗೂ ಕಪ್ಪು ಬಣ್ಣದ ಹೂವಿನ ವಿನ್ಯಾಸದ ಚೂಡಿದಾರ್ ಪ್ಯಾಂಟ್ ಧರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೃತ ಮಹಿಳೆಯ ವಾರಸುದಾರರು ಅಥವಾ ಸಂಬಂಧಿಕರ ಬಗ್ಗೆ ಮಾಹಿತಿ ಇರುವವರು ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ (ಮೊ. 9108630967, 9902193960) ಅಥವಾ ರೈಲ್ವೆ ಪಿಎಸ್ಐ (ಮೊ. 9480802118) ಅವರನ್ನು ಸಂಪರ್ಕಿಸುವಂತೆ ರೈಲ್ವೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.