ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೋಲಿಯೋ ಅಭಿಯಾನದ ಪೋಸ್ಟರ್ ಅನ್ನು ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಅವರು ಬಿಡುಗಡೆ ಮಾಡಿದರು.

ಬಳಿಕ ಜಿಲ್ಲಾಧಿಕಾರಿಗಳು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ವರ್ಷ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ನಡೆಸಲಾಗುತ್ತದೆ. ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು 1,00,434 ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕುವ ಗುರಿಯನ್ನು ಹೊಂದಿದ್ದು, 479 ಬೂತ್ ಗಳಲ್ಲಿ 2046 ಲಸಿಕಾದಾರರು ಈ ಅಭಿಯಾನದಲ್ಲಿ ಕರ್ತವ್ಯ ನಿರ್ವಹಿಸುತ್ತಾರೆ ಎಂದು ಹೇಳಿದರು.

ಇಲ್ಲಿಯವರೆಗೂ ಎಷ್ಟೇ ಬಾರಿ ಪಲ್ಸ್ ಪೋಲಿಯೋ ಹನಿ ಹಾಕಿಸಿದರು ಕೂಡ ಜೂನ್ 28 ರಿಂದ ಜುಲೈ 1 ರವರೆಗೆ ನಡೆಯುವ ಅಭಿಯಾನದಲ್ಲಿ ಭಾಗಿಯಾಗಿ 0-5 ವರ್ಷದೊಳಗಿನ ಮಕ್ಕಳನ್ನು ಹೊಂದಿರುವ ಪಾಲಕರು ಪಲ್ಸ್ ಪೋಲಿಯೋ ಹಾಕಿಸುವುದನ್ನು ಮರೆಯಬಾರದು ಎಂದರು.

ಜಿಲ್ಲೆಯ ಎಲ್ಲಾ ಪ್ರಾಥಮಿಕ ಅರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಆಯುಷ್ಮಾನ್ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರ, ಶಾಲೆಗಳು, ಬಸ್ ಸ್ಟಾಪ್, ರೈಲ್ವೆ ಸ್ಪೇಷನ್, ವಿಮಾನ ನಿಲ್ದಾನ ಹಾಗೂ ಟೋಲ್ ಗಳಲ್ಲಿ ಪೋಲಿಯೋ ಬೂತ್ ಗಳನ್ನು ಸ್ಥಾಪಿಸಲಾಗಿದೆ, ಹತ್ತಿರದ ಪೋಲಿಯೋ ಬೂತ್ ನಲ್ಲಿ ತಮ್ಮ ಮಕ್ಕಳಿಗೆ ಉಚಿತ ಲಸಿಕೆ ಹಾಕಿಸಬಹದಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಲಕ್ಕಾ ಕೃಷ್ಣ ರೆಡ್ಡಿ, ಆರ್.ಸಿ.ಎಚ್ ಅಧಿಕಾರಿ ಸೀಮಾ ಮಹಬಳೆ ಸೇರಿದಂತೆ ಸಿಬ್ಬಂದಿ ಇದ್ದರು.

Leave a Reply

Your email address will not be published. Required fields are marked *

error: Content is protected !!