
ದೊಡ್ಡಬಳ್ಳಾಪುರ ತಾಲೂಕಿನ ಪಾಲನಜೋಗಹಳ್ಳಿ ಸಮೀಪ ಹಿಂದೂಪುರ–ಯಲಹಂಕ ರಾಜ್ಯ ಹೆದ್ದಾರಿಯಲ್ಲಿ ಬಸ್ ಹಾಗೂ ನೀರಿನ ಟ್ಯಾಂಕರ್ ಹೊತ್ತ ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಅಪಘಾತದಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡು ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.
ಹೆದ್ದಾರಿಯಲ್ಲಿ ನೀರಿನ ಟ್ಯಾಂಕರ್ ಟ್ರ್ಯಾಕ್ಟರ್ ಗೆ ಬಸ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿ ರಭಸಕ್ಕೆ ನೀರಿನ ಟ್ಯಾಂಕರ್ ರಸ್ತೆಗೆ ಉರುಳಿಬಿದ್ದಿದೆ. ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದರು.

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಅಪಘಾತಕ್ಕೀಡಾದ ವಾಹನಗಳನ್ನು ತೆರವುಗೊಳಿಸುವ ಕಾರ್ಯದಲ್ಲಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….