ಅತಿ ಶೀಘ್ರದಲ್ಲಿ ಸಿಎಂ ಡಿಕೆಶಿ ಘಾಟಿಗೆ ಭೇಟಿ- ಆರ್.ವಿ ಮಹೇಶ್ ಕುಮಾರ್

ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಅವರು ಇಂದು ದೊಡ್ಡಬಳ್ಳಾಪುರ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಜಿ.ಸಿ ಚಂದ್ರಶೇಖರ್ ಅವರನ್ನು ಘಾಟಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್, ತೂಬಗೆರೆ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿ ಸಿದ್ದಪ್ಪ, ಬಗರ್ ಹುಕ್ಕುಂ ಕಮಿಟಿ ಸದಸ್ಯ ಗಂಗಸಂದ್ರ ಶ್ರೀಧರ್ ಸೇರಿದಂತೆ ಇತರರು ಅದ್ಧೂರಿಯಾಗಿ ಸ್ವಾಗತ ಕೋರಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್ ವಿ ಮಹೇಶ್ ಮಾತನಾಡಿ, ಶೀಘ್ರವಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ನೂತನ ದಾಸೋಹ ಭವನಕ್ಕೆ ಭೂಮಿಪೂಜೆ ನೇರವೇರಿಸಲಿದ್ದಾರೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!