ಘಾಟಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದ ಎಂಎಲ್‌ಸಿ ಟಿ.ಎ. ಶರವಣ, ಅವಧೂತ ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಎಂಎಲ್‌ಸಿ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿ ಭೇಟಿ ನೀಡಿ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಾಲಯಕ್ಕೆ ಆಗಮಿಸಿದ ಟಿ.ಎ. ಶರವಣ ಹಾಗೂ ಅವಧೂತ ವಿನಯ್ ಗುರೂಜಿಯನ್ನು ದೇವಾಲಯದ ಅರ್ಚಕರು ಹಾಗೂ ಸಿಬ್ಬಂದಿ ಆತ್ಮೀಯವಾಗಿ ಸ್ವಾಗತಿಸಿದರು. ಬಳಿಕ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿ ರಾಜ್ಯದ ಸುಖ, ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.

ದರ್ಶನದ ನಂತರ ದೇವಾಲಯದ ವತಿಯಿಂದ ಪ್ರಸಾದ ಹಾಗೂ ಗೌರವ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಈ ವೇಳೆ ದೇವಾಲಯದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಭಕ್ತರು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *

error: Content is protected !!