ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್


ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಯಿತು.

ಬೆಂಗಳೂರು ಕಡೆಯಿಂದ ಬಂದ ಟ್ರಕ್ ಮತ್ತೆ ಬೆಂಗಳೂರು ಕಡೆಗೆ ತೆರಳಲು ಯೂ-ಟರ್ನ್ ಪಡೆಯುತ್ತಿದ್ದ ವೇಳೆ ಮಧ್ಯದಲ್ಲೇ ಸ್ಥಗಿತಗೊಂಡಿತು. ಇದರಿಂದ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳ ಉದ್ದನೆಯ ಸರತಿ ನಿರ್ಮಾಣವಾಗಿ, ಪ್ರಯಾಣಿಕರು ಮತ್ತು ವಾಹನ ಸವಾರರು ಪರದಾಡುವಂತಾಯಿತು.

ವಿಷಯ ತಿಳಿದ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ಟ್ರಕ್ ಅನ್ನು ತಳ್ಳುವ ಮೂಲಕ ರಸ್ತೆ ಬದಿಗೆ ಸ್ಥಳಾಂತರಿಸಲು ಸಹಕರಿಸಿದರು. ಬಳಿಕ ವಾಹನ ಸಂಚಾರವನ್ನು ಸುಗಮಗೊಳಿಸಲಾಯಿತು.

ಘಟನೆಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದರೂ, ಸ್ಥಳೀಯರ ತ್ವರಿತ ಸಹಕಾರದಿಂದ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿತು.

Leave a Reply

Your email address will not be published. Required fields are marked *

error: Content is protected !!